ಸುಳ್ಯ: ನದಿಗೆ ಮೀನು ಹಿಡಿಯಲು ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದಲ್ಲಿ ನ.5 ರಂದು ರಾತ್ರಿ ನಡೆದಿದೆ.
ಮೃತರನ್ನು ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕರಂಗಲ್ಲಿನ ದಿ. ಕೇಶವ ಗೌಡರವರ ಪುತ್ರ ಪ್ರಕಾಶ್ (37) ಎನ್ನಲಾಗಿದೆ.
ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಲ್ಲಿನ ಎಸ್ ಐ ಜಂಬೂರಾಜ್ ಮಾಹಜನ್ ರವರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿರುವುದಾಗಿ ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.