ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ತತ್ವದಡಿ ನಡೆಯುತ್ತಿರುವ ಬಿರುವೆರ್ ಕುಡ್ಲ ಬಜಪೆ ಘಟಕ ಬಜಪೆ ಪರಿಸರದ ಪ್ರತಿಭಾನ್ವಿತ ಅರ್ಹ ಬಡ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಗೌರವ ಅರ್ಪಣೆ ಹಾಗೂ ಪ್ರೋತ್ಸಾಹ ಧನ ಸಹಾಯ ಕಾರ್ಯಕ್ರಮವು ನ.07 ರಂದು ಘಟಕದ ಕಾರ್ಯಾಲಯದಲ್ಲಿ ನಡೆಯಿತು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಅರ್ಹ ಬಡ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಗೌರವಾರ್ಪಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳು ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಪ್ಯುಲರ್ ಬಂಟ್ಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶಹನಾ ಎಂ ಫೆಹಲ್ಲವಿ ರವರು ಭಾಗವಹಿಸಿದ್ದರು. ಬಿರುವೆರ್ ಕುಡ್ಲ ಬಜಪೆ ಘಟಕದ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು ಹಾಗೂ ಸೇವಾ ಕಾರ್ಯಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕಟೀಲ್ ಕನ್ಸ್ಟ್ರಕ್ಷನ್ಸ್ ಕೂಳೂರು ಮಾಲಕರಾದ ಶಿವರಾಮ ಕೋಟ್ಯಾನ್ ಪೆರ್ಮುದೆ, ಸಿಟಿ ಕೆಟರಿಂಗ್ ಮಾಲಕರಾದ ವಿಜಯಕುಮಾರ್ ಕಾನ, ಹಿರಿಯರಾದ ಚಂದಪ್ಪ ಕುಂದರ್, ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾಧ್ಯಕ್ಷರು ಶರತ್ ಪೂಜಾರಿ ಬಜಪೆ, ಅಧ್ಯಕ್ಷರು ಪ್ರಶಾಂತ್ ಕುಮಾರ್ ಕೆಂಜಾರು ಕಾನ, ಕಾರ್ಯಾಧ್ಯಕ್ಷರು ಗಣೇಶ್ ಪೂಜಾರಿ ಬಜಪೆ, ಕೇಂದ್ರ ಸಮಿತಿಯ ಸಂಘಟನಾ ಅಧ್ಯಕ್ಷರು ಚಂದ್ರಶೇಖರ್ ಅಮೀನ್, ಗೌರವಾರ್ಪಣೆ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರ ಹೆತ್ತವರು, ಘಟಕದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಬಿರುವೆರ್ ಕುಡ್ಲ ಬಜಪೆ ಘಟಕದ ಪ್ರಧಾನ ಕಾರ್ಯದರ್ಶಿ ಸೂರಜ್ ಪೂಜಾರಿ ಎಕ್ಕಾರು, ಹಾಗೂ ಚಂದ್ರಶೇಖರ್ ಅಮೀನ್ ಕಾರ್ಯಕ್ರಮವನ್ನು ನಿರೂಪಿಸಿದರು.