ಗರ್ಭಿಣಿ ಮಹಿಳೆಯೊಬ್ಬರು ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ನೂಜಿಬೆಟ್ಟುವಿನಿಂದ ಕಾಸರಗೋಡು ಹೋಗುವ ಮಾರ್ಗ ಮಧ್ಯೆ ನಡೆದಿದೆ.
ಹಿಂದೂ ಜಾಗರಣ ವೇದಿಕೆಯ ಆಂಬ್ಯುಲೆನ್ಸ್ ನಲ್ಲಿ ಕಾಸರಗೋಡು ತಾಲೂಕು ದೇಲಂಪಾಡಿ ಗ್ರಾಮದ ನೂಜಿಬೆಟ್ಟು ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ ರವರ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮನೀಡಿದ್ದಾರೆ.
ನೂಜಿಬೆಟ್ಟು ನಿಂದ ಕಾಸರಗೋಡು ಸರಕಾರಿ ಆಸ್ಪತ್ರೆಗೆ ಹೋಗುವ ಮಾರ್ಗದ ಮಧ್ಯೆ ರಾಜೇಶ್ ಪಂಚೋಡಿ ಯವರು ಚಾಲಕರಾಗಿದ್ದ ಆಂಬ್ಯುಲೆನ್ಸ್ ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗುವನ್ನು ಆರೈಕೆ ಮಾಡಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.