ಮದ್ದಡ್ಕ : ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮದ್ದಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ನ. 9 ರಂದು ನಡೆದಿದೆ.
ಅತೀ ವೇಗದಿಂದ ಚಲಿಸುತ್ತಿದ್ದ ಬಸ್ ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರ ಸಹಾಯದಿಂದ ಹರಸಾಹಸಪಟ್ಟು ಬಸ್ಸಿನಲ್ಲಿರುವ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.