ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನ.9 ರಂದು ಸಂಜೆ ನಡೆದಿದೆ.
ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.