ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನ.9 ರಂದು ಸಂಜೆ ನಡೆದಿದ್ದು, ಅಪಘಾತದಿಂದಾಗಿ ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರರಿಬ್ಬರನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೇ ಆಸ್ಪತ್ರೆಗೆ ತಲುಪಿದ ಸ್ವಲ್ಪ ಹೊತ್ತಲೇ ಸಹಸವಾರ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಕುರಿಯ ಬಳ್ಳಮಜಲು ನಿವಾಸಿ ವಸಂತ ರೈ ಎಂದು ಗುರುತಿಸಲಾಗಿದೆ.
ನಾರಾಯಣ ನಾಯ್ಕ್ ಮತ್ತು ವಸಂತ ರೈ ಯವರು ಪುತ್ತೂರಿನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ರಸ್ತೆಗೆ ಎಸೆಯಲ್ಪಟ್ಟ ವಸಂತ ರೈ ಯವರು ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.