ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಎಚ್ಚರಿಕೆಯ ಬ್ಯಾನರ್ ರನ್ನು ಪೊಲೀಸರು ದೇವಾಲಯದ ಪರಿಸರದಲ್ಲಿ ಅಳವಡಿಸಿದ್ದಾರೆ.
ಇಂತಹ ಚಟುವಟಿಕೆಗಳು ಪರಿಸರದಲ್ಲಿ ಕಂಡು ಬಂದಲ್ಲಿ ತುರ್ತು ಸ್ಪಂದನಾ ಸೇವೆ ನಂಬರ್ (ERSS): 112, ಪುಂಜಾಲಕಟ್ಟೆ ಪೊಲೀಸ್ ಠಾಣೆ 08256-279375, 8277986411 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಎಂದು ಪ್ರಕಟಣೆಯ ಬ್ಯಾನರ್ ಅನ್ನು ಪೊಲೀಸರು ಕಾರಿಂಜ ದೇವಾಲಯದ ಪರಿಸರದಲ್ಲಿ ಅಳವಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಉಂಟು ಮಾಡಿದ ಅನೇಕ ಘಟನೆಗಳು ಮರುಕಳಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಈ ಕ್ರಮದ ಮೂಲಕ ಎಚ್ಚರಿಕೆ ನೀಡಿದೆ.