ಬಂಟ್ವಾಳ: ಪಡಿಬಾಗಿಲು ಶಾಲೆಯಲ್ಲಿ ಎಲ್.ಕೆ.ಜಿ ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಮತ್ತು ಪೋಷಕರ ಸಭೆ ನ.10 ರಂದು ನಡೆಯಿತು.
ವಿದ್ಯಾಸಿರಿ ಶಿಕ್ಷಣ ಕೇಂದ್ರದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಮತ್ತು ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾಸಿರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು.
ಗೌರವಾಧ್ಯಕ್ಷರಾದ ಲಿಂಗಪ್ಪ ಗೌಡ, ಕಾರ್ಯದರ್ಶಿ ಜಿನಚಂದ್ರಜೈನ್, ಕೇಪು ಗ್ರಾಮ ಪಂಚಾಯಿತಿ ಸದಸ್ಯರಾದ ಜಗಜ್ಜೀವನ್ ರಾಮ್ ಶೆಟ್ಟಿ, ಎಸ್. ಡಿ. ಎಂ. ಸಿ ಸದಸ್ಯೆ ರೇಖಾ, ಮುಖ್ಯ ಶಿಕ್ಷಕಿ ಶಶಿಕಲಾ ಮತ್ತು ಪೋಷಕರು, ಮಕ್ಕಳು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳಾದ ಹಿತಾಶ್ರೀ ಮತ್ತು ಮೌಲ್ಯ ಪ್ರಾರ್ಥನೆ ಹಾಡಿದರು. ಮಕ್ಕಳಿಗೆ ಅಭ್ಯಾಸ ಪುಸ್ತಕ ಕೊಡುವುದರ ಮೂಲಕ ಸ್ವಾಗತಿಸಲಾಯಿತು. ವಿದ್ಯಾಸಿರಿ ಶಿಕ್ಷಣ ಕೇಂದ್ರದ ಶಿಕ್ಷಕಿ ಜಯಶ್ರೀ ಕೆ ಸ್ವಾಗತಿಸಿ, ನಿರೂಪಿಸಿದರು. ವಿದ್ಯಾಸಿರಿ ಶಿಕ್ಷಣ ಕೇಂದ್ರದ ಸಹ ಶಿಕ್ಷಕಿ ನವ್ಯ ಸಹಕರಿಸಿದರು.