ಮಂಗಳೂರು: ನಗರದ ಮಣ್ಣಗುಡ್ಡ ಬಳಿಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿ 2 ಮನೆಯಿಂದ ಸುಮಾರು 6 ಲಕ್ಷ ಕಳವಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳ್ಳರು ಮನೆಯ ಸುತ್ತಮುತ್ತ ಸುತ್ತಾಡುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇಬ್ಬರು ಸುತ್ತಾಡುತ್ತಿರುವುದು ಕಂಡು ಬಂದಿದೆ. ಈ ಕಳ್ಳತನದಲ್ಲಿ ಇನ್ನೂ ಹಲವರು ಭಾಗಿಯಾಗುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಬರ್ಕೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಗರದಲ್ಲಿ ಆಗಾಗ ದ್ವಿಚಕ್ರವಾಹನ, ಮನೆಗೆ ನುಗ್ಗಿ ಕಳ್ಳತನ ಪ್ರಕರಣಗಳು ಜಾಸ್ತಿಯಾಗುತ್ತಿವೆ. ತಂಡವೊಂದು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆಯಾ ಎಂಬ ಅನುಮಾನ ದಟ್ಟವಾಗಿ ಕಾಡತೊಡಗಿದೆ. ಈ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.