ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ವಿಧಾನ ಪರಿಷತ್ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಬಲ ಪಕ್ಷಗಳಿಗೆ ಸ್ಪರ್ಧೆ ನೀಡಲು ಸಹಕಾರಿ ಧುರೀಣ ಕಣಕ್ಕೆ ಇಳಿಯಲಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಉತ್ಸಾಹ ತೋರಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ಡಾ. ಎಂ ಎನ್ ಆರ್ ಈ ಕುರಿತು ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ‘ನಿನ್ನೆಯಿಂದ ಎಲ್ಲರೂ ನನಗೆ ಚುನಾವಣೆಗೆ ಸ್ಪರ್ಧಿಸಲು ಒತ್ತಡ ಹಾಕುತ್ತಿದ್ದಾರೆ’.
‘ಎರಡು-ಮೂರು ದಿನಗಳಲ್ಲಿ ಚುನಾವಣೆಗೆ ನಿಲ್ಲುವ ಬಗ್ಗೆ ತೀರ್ಮಾನ ಮಾಡುತ್ತೇನೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಸೋಲು-ಗೆಲುವು ಮುಖ್ಯವಲ್ಲ ಯಾವುದೇ ಕಾರಣಕ್ಕೂ ಪಕ್ಷದಿಂದ ಸ್ಪರ್ಧಿಸುವುದಿಲ್ಲ. ನವೋದಯ ಸದಸ್ಯರು, ಪಂಚಾಯತ್ ಸದಸ್ಯರು, ಸ್ವಸಹಾಯ ಸಂಘ, ಸಹಕಾರಗಳಿಂದ ಒತ್ತಡ ಇದೆ. ನ.17 ರಂದು ನನ್ನ ತೀರ್ಮಾನ ಪ್ರಕಟಿಸುತ್ತೇನೆ. ಸಾಧ್ಯವಾದರೆ ಅದೇ ದಿನ ನಾಮಪತ್ರ ಸಲ್ಲಿಸುತ್ತೇನೆ ಎಂದರು.