ಪುತ್ತೂರು: ಬೈಕ್, ಸ್ವಿಫ್ಟ್ ಕಾರು ಮತ್ತು ಆಲ್ಟೊ ಕಾರಿನ ನಡುವೆ ಸರಣಿ ಅಪಘಾತ ನಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನ.11 ರಂದು ಸವಣೂರಿನಲ್ಲಿ ನಡೆದಿದೆ.
ಗಾಯಗೊಂಡು ಬೈಕ್ ಸವಾರ ನನ್ನು ಬೆಳಂದೂರು ಕೆಳೆಂಬಿರಿ ನಿವಾಸಿ ಚೇತನ್ ಎನ್ನಲಾಗಿದೆ.
ಸವಣೂರು ಕಡೆಯಿಂದ ಕಾಣಿಯೂರು ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಕಾಣಿಯೂರು ಕಡೆಯಿಂದ ಸವಣೂರು ಕಡೆ ಬರುತ್ತಿದ್ದ ಬೈಕ್ ಗೆ ಮತ್ತು ಆಲ್ಟೊ ಕಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.