ಸುಳ್ಯದಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಆಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ನಾಮಫಲಕಕ್ಕೆ ಗುದ್ದಿ ಪಲ್ಟಿ ಹೊಡೆದ ಘಟನೆ ಅಮ್ಚಿನಡ್ಕದಲ್ಲಿ ನ.11 ರಂದು ನಡೆದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಸಣ್ಣ ಮಗು ಸಹಿತ ಕುಟುಂಬದವರು ಯಾವುದೇ ಅಪಾಯವಿಲ್ಲದೇ ಪವಾಡ ಸದೃಶವಾಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.