ಚೆನ್ನೈ: ತಮಿಳುನಾಡಿನಲ್ಲಿ ಎಡಬಿಡದೆ ಧಾರಾಕಾರ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದಲೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಇದುವರೆಗೂ 14 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜಧಾನಿ ಚೆನ್ನೈನಲ್ಲಂತೂ ಭಾರೀ ಮಳೆ ರಸ್ತೆಗಳು ಜಲಾವೃತಗೊಂಡಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಹೀಗಿರುವಾಗಲೇ ಸುಮಾರು 11 ಎನ್ಡಿಆರ್ಎಫ್ ಮತ್ತು 7 ಎಸ್ಡಿಆರ್ಎಫ್ ತಂಡಗಳು ಜನರ ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ. ಈ ಸಂಬಂಧ ಹಲವು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಇನ್ನು, ಚೆನ್ನೈನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ನಿರಾಶ್ರಿತ ವ್ಯಕ್ತಿಯೋರ್ವನನ್ನು ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಎಂಬುವರು ಹೆಗಲ ಮೇಲೆ ಹೊತ್ತುಕೊಂಡು ಬಂದು ರಕ್ಷಿಸಿದ್ದಾರೆ. ಹೆಗಲ ಮೇಲೆ ಹೊತ್ತುಕೊಂಡು ನಿರಾಶ್ರಿತ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಪೊಲೀಸ್ ಅಧಿಕಾರಿ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಈ ವಿಡಿಯೋ ಟ್ವೀಟ್ ಮಾಡಿರುವ ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು, ಮಹಿಳಾ ಪೊಲೀಸ್ ಅಧಿಕಾರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದ್ದು, ನೆಟ್ಟಿಗರು ರಾಜೇಶ್ವರಿ ಅವರನ್ನು ಭಾರೀ ಕೊಂಡಾಡಿದ್ದಾರೆ.
No one has shoulders as strong as you Inspector Rajeshwari 💪Bravo. Helping out an unconscious man in terrible rains and rushing him to a nearby hospital in an auto is indeed laudable. Video by @Shilpa1308 #TamilNaduRains #Police #ChennaiRains2021 pic.twitter.com/VZqc2mLQ4U
— Supriya Sahu IAS (@supriyasahuias) November 11, 2021