ಪುತ್ತೂರು: ಅವಳಿ ವೀರ ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಹುಟ್ಟೂರಾದ ಪಡುಮಲೆ ಕ್ಷೇತ್ರದಲ್ಲಿ ಎಪ್ರಿಲ್ 23 ಮತ್ತು 24ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ಫೆ.1ರಂದು ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.
ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಟ್ರಸ್ಟ್ ಉಪಾಧ್ಯಕ್ಷರಾದ ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವಿಜಯ ಕುಮಾರ್ ಸೊರಕೆರವರು ಕಾರ್ಯಕ್ರಮದ ವಿವರ ನೀಡಿದರು. ಟ್ರಸ್ಟ್ ಕಾರ್ಯದರ್ಶಿ ಶ್ರೀಧರ ಪಟ್ಲ, ಸದಸ್ಯ ನಾರಾಯಣ ಪೂಜಾರಿ ಸರೋಳಿಮೂಲೆ, ಪಡುಮಲೆ ಬ್ರಹ್ಮಕಲಶೋತ್ಸವದ ತಾಲೂಕು ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ ನರಿಮೊಗರು, ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರಾದ ಕೆ.ಪಿ.ದಿವಾಕರ ಮತ್ತು ಸೇಸಪ್ಪ ಬಂಗೇರರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಮುಖರಾದ ದ.ಕ. ಜಿ.ಪಂ. ಸದಸ್ಯೆ ಶಯನಾ ಜಯಾನಂದ, ಪುತ್ತೂರು ತಾ.ಪಂ.ಮಾಜಿ ಅಧ್ಯಕ್ಷ ಕೆ.ಜಯಾನಂದ, ತಾ.ಪಂ.ಮಾಜಿ ಸದಸ್ಯ ಎಂ.ಎಸ್.ಮುಕುಂದ, ಕಡಬ ತಾ.ಪಂ.ಸದಸ್ಯೆ ಉಷಾ ಅಂಚನ್, ನಗರಸಭಾ ಸದಸ್ಯ ಸುಂದರ ಪೂಜಾರಿ ಬಡಾವು, ಕೋಡಿಂಬಾಡಿ ಗ್ರಾ.ಪಂ.ಸದಸ್ಯ ಜಯಪ್ರಕಾಶ್ ಬದಿನಾರು, ಉಮೇಶ್ ಕುಮಾರ್ ಬರೆಮೇಲು, ಕೆ.ಮೋನಪ್ಪ ಪೂಜಾರಿ ಕೆರೆಮಾರು, ಉದಯ ಬಂಗೇರ, ಚಂದ್ರಶೇಖರ ಎನ್.ಎಸ್.ಡಿ., ಚಂದ್ರಶೇಖರ ಮುಂಡೂರು, ಎಂ.ಕೇಶವ ಸಹಿತ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.