ಪುತ್ತೂರು: ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್(ರಿ.) ಸಾಲ್ಮರ ಇದರ ಆಶ್ರಯದಲ್ಲಿ ‘ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಮಧುಮೇಹ ಕಾಯಿಲೆಯ ಬಗ್ಗೆ ಮುಂಜಾಗ್ರತಾ ಮಾಹಿತಿ ಶಿಬಿರ’ ನ.14 ರಂದು ಸಾಲ್ಮರ ಮೌಂಟನ್ ವ್ಯೂ ಶಾಲೆಯಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿದೆ.
ಶಿಬಿರದಲ್ಲಿ ವೈದ್ಯಕೀಯ ಶಾಸ್ತ್ರ ತಜ್ಞರು, ಮಧುಮೇಹ ಚಿಕಿತ್ಸಾ ತಜ್ಞರು, ಮೂಳೆ ತಜ್ಞರು, ಕಿವಿ-ಮೂಗು-ಗಂಟಲು ತಜ್ಞರು, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು, ಮಕ್ಕಳ ತಜ್ಞರು, ಶಸ್ತ್ರ ಚಿಕಿತ್ಸಾ ತಜ್ಞರು, ಕಣ್ಣಿನ ಚಿಕಿತ್ಸಾ ತಜ್ಞರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.