ಬಂಟ್ವಾಳ: ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ಮೂಲರಪಟ್ಣ ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸೇತುವೆಯಲ್ಲಿ ಊರಿನ ಪ್ರಮುಖರ ಜತೆ ಸಾಗಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸೇತುವೆ ನಿರ್ಮಾಣ ಸಂಸ್ಥೆ ಕಾವೂರು ಮುಗ್ರೋಡಿ ಕನ್ ಸ್ಟ್ರಕ್ಷನ್ಸ್ ಮಾಲಕ ಸುಧಾಕರ ಶೆಟ್ಟಿ ಮುಗ್ರೋಡಿ, ದಾಮೋದರ್, ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಮೊದಲಾದವರಿದ್ದರು.