ಮಂಗಳೂರು: ಕೋಟೆಕಾರು ಹಿದಾಯತ್ ನಗರದಲ್ಲಿ ಎಸ್ ಡಿಪಿಐ ಕಾರ್ಯಕರ್ತನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಇಕ್ಬಾಲ್ ಎನ್ನಲಾಗಿದೆ.
ಇಕ್ಬಾಲ್ ಮುಳ್ಳುಗುಡ್ಡೆ ಪ್ರದೇಶದಲ್ಲಿ ಬಡವರಿಗೆ ಪಕ್ಷದ ವತಿಯಿಂದ ನಿರ್ಮಿಸಿ ಕೊಡುತ್ತಿದ್ದ ಮನೆಯ ಕಾಮಗಾರಿ ಕೆಲಸಕ್ಕೆ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳ ತಂಡ ಅವರ ಮೇಲೆ ತಲುವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದೆ ಎಂದು ತಿಳಿದು ಬಂದಿದೆ.
ಗಾಯಗೊಂಡ ಇಕ್ಬಾಲ್ ರನ್ನು ತೊಕ್ಕೊಟ್ಟುವಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಕ್ಬಾಲ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.