ಮಂಗಳೂರು: ಬೈಕೊಂದು ಕಾರಿನ ಹಿಂಬಂದಿಗೆ ಡಿಕ್ಕಿ ಹೊಡೆದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ರಾತ್ರಿ ದೇರಳಕಟ್ಟೆಯ ಕುತ್ತಾರು ಬಳಿ ನಡೆದಿದೆ.
ನ .12 ರ ತಡರಾತ್ರಿ ದೇರಳಕಟ್ಟೆಯ ಕುತ್ತಾರ್ ಸಮೀಪ ಈ ಅಪಘಾತ ಸಂಭವಿಸಿದ್ದು, ಕಾರಿನ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದಿದೆ. ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.
ಕೂಡಲೇ ಸ್ಥಳೀಯರು ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುವಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.