ಮಂಗಳೂರು: ನಗರದ ಕೋಡಿಕಲ್ ಬಳಿಯ ನಾಗಬನಕ್ಕೆ ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಘಟನೆಯನ್ನು ಖಂಡಿಸಿರುವ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿದ್ದಾರೆ.
ಉರ್ವ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂ ಮುಖಂಡ ಶರಣ್ ಪಂಪ್ವೆಲ್, ಶಾಸಕ ಡಾ. ಭರತ್ ಶೆಟ್ಟಿ ರವರು ಸ್ಥಳಕ್ಕೆ ಭೇಟಿ ನೀಡಿದ್ದು, ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರಿನ ನಾಗನಕಟ್ಟೆಗೆ ಕೆಲವು ದಿನಗಳ ಹಿಂದೆ ದುಷ್ಕರ್ಮಿಗಳು ಹಾನಿ ಮಾಡಿದ್ದರು.