ಪುತ್ತೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಪೋಕ್ಸೋ ಕಾಯ್ದೆ ಕೇಸು ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ದಲಿತ ಸಂಘಟನೆಯ ಮುಖಂಡ ರಾಜು ಹೊಸ್ಮಠ ಪರಾರಿಯಾಗಲು ಸಹಕಾರ ನೀಡಿರುವ ಆರೋಪದಡಿ ಇಬ್ಬರನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಜಿರೆಯ ಗಣೇಶ್ ಮತ್ತು ಮೂಡಿಗೆರೆಯ ಲಿಂಗಪ್ಪ ಬಂಧಿತರು.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ರಾಜು ಹೊಸ್ಮಠ ವಿರುದ್ಧ ಕೆಲವು ದಿನಗಳ ಹಿಂದೆ ಪೋಕ್ಸೋ ಕೇಸು ದಾಖಲಾಗಿದ್ದು, ಈ ವಿಚಾರ ತಿಳಿಯುತ್ತಿದ್ದಂತೆಯೇ ರಾಜು ಹೊಸ್ಮಠ ತಲೆಮರೆಸಿಕೊಂಡಿದ್ದರು. ಅವರನ್ನು ಮೂಡಿಗೆರೆಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಬಿಡಲಾಗಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಗೆ ಪರಾರಿಯಾಗಲು ಸಹಕಾರ ನೀಡಿದ ಕಾರಣಕ್ಕಾಗಿ ಇಬ್ಬರನ್ನು ಬಂಧಿಸಲಾಗಿದೆ. ರಾಜು ಹೊಸ್ಮಠ ರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದು, ಎಲ್ಲೆಡೆ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.