ಬಂಟ್ವಾಳ: ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ನಡೆದಿದೆ.
ಮೃತರನ್ನು ಉಪ್ಪಿನಂಗಡಿಯ ಆಶಿತ್(21), ಚೇತನ್(25) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಸಿಂಚನ್ ಮತ್ತು ಸುದೀಪ್ ಎನ್ನಲಾಗಿದೆ.
ಕಾರ್ಯಕ್ರಮ ಮುಗಿಸಿ ಮಂಗಳೂರು ಕಡೆಯಿಂದ ಆಗಮಿಸುತ್ತಿದ್ದ ಪಿಕಪ್ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಇಬ್ಬರು ಅದಾಗಲೇ ಮೃತಪಟ್ಟಿದ್ದಾರೆ.
ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಪಿಕಪ್ ನ ಹಿಂಬದಿಯಲ್ಲಿದ್ದರು ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ