ಬೆಳ್ತಂಗಡಿ: ಅಕ್ರಮ ಕೋಳಿ ಅಂಕ ನಡೆಸುತ್ತಿದ್ದ ಜಾಗಕ್ಕೆ ಬಂಟ್ವಾಳ ಎಎಸ್ಪಿ ತಂಡದವರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಕುರಿತು ದೊರೆತ ಮಾಹಿತಿ ಮೇರೆಗೆ ಬಂಟ್ವಾಳ ಎಎಸ್ಪಿ ಮತ್ತು ತಂಡದವರು ಮಫ್ತಿಯಲ್ಲಿ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.