ಬೆಂಗಳೂರು: ಅಳಿವಿನಂಚಿನಲ್ಲಿರುವ ಅಪರೂಪದ ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಕಲಾಸಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಮುತ್ತು ಹಮಿದ್ ಮೀರಾ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯಲ್ಲ ನಕ್ಷತ ಆಮೆಗಳ ಮಾರಾಟಕ್ಕೆ ಆರೋಪಿ ಯತ್ನಿಸಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 401 ನಕ್ಷತ್ರ ಆಮೆಗಳು ವಶಕ್ಕೆ ಪಡೆಯಲಾಗಿದೆ.
ಆರೋಪಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಕ್ಷತ್ರ ಆಮೆಗಳು ಅಳಿವಿನಂಚಿನಲ್ಲಿರುವ ಪ್ರಭೇದಕ್ಕೆ ಸೇರಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಕ್ಷತ್ರ ಆಮೆಗಳಿಗೆ ಭಾರೀ ಭೇಡಿಕೆ ಇದ್ದು, ವಶಪಡಿಸಿಕೊಂಡ ಆಮೆಗಳ ಮೌಲ್ಯ ಸರಿಸುಮಾರು 50 ಲಕ್ಷ ರೂಪಾಯಿ ಎನ್ನಲಾಗಿದೆ.