ಸುಬ್ರಹ್ಮಣ್ಯ: ಶಿಕ್ಷಕರ ಮೇಲಿನ ಅಸಮಾಧಾನದಿಂದ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾಗ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿ ಪೋಷಕರೊಂದಿಗೆ ಮಾತುಕತೆ ನಡೆಸಿದ ಘಟನೆ ಹರಿಹರ ಪಲ್ಲತ್ತಡ್ಕ ಸ.ಪ್ರಾ.ಶಾಲೆಯಲ್ಲಿ ನಡೆದಿದೆ.
ಹರಿಹರ ಪಲ್ಲತ್ತಡ್ಕ ಶಾಲೆಯ ಮೂವರು ಶಿಕ್ಷಕರು ಶಾಲೆಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದು ಆರೋಪಿಸಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೆ ನ.16 ರಂದು ಪೋಷಕರು ತಾವೇ ಶಾಲೆಗೆ ಬಂದು ಪ್ರತಿಭಟನೆ ಆರಂಭಿಸಿದ್ದರು. ಈ ವಿಷಯ ತಿಳಿದ ಕ್ಷೇತ್ರ ಶಿಕ್ಷಾಧಿಕಾರಿ ಎಸ್.ಪಿ. ಮಹಾದೇವ ರವರು ಶಾಲೆಗೆ ಆಗಮಿಸಿ ಶಾಲಾ ಹೊರಭಾಗದಲ್ಲಿ ಸೇರಿದ್ದ ಪೋಷಕರೊಂದಿಗೆ ಮಾತುಕತೆ ನಡೆಸಿದರು.
ಎಲ್ಲಾ ಸಮಸ್ಯೆ ಬಗೆಹರಿಸದೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ನಿರಾಕರಿಸಿದ್ದಾರೆ. ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸುವುದಾಗಿ ಅವರು ಭರವಸೆ ನೀಡಿದರು. ಆದರೆ ಪಟ್ಟು ಬಿಡದ ಪೋಷಕರು ಪರ್ಮನೆಂಟ್ ಶಿಕ್ಷಕರನ್ನು ಕೊಡುವಲ್ಲಿವರೆಗೆ, ಇಲ್ಲಿರುವ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುವವರೆಗೆ ಮತ್ತು ಸಮಸ್ಯೆ ಬಗೆಹರಿಯುವವರೆಗೆ ತಾವು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.