ಬಂಟ್ವಾಳ: ಲಾರಿ ಹಾಗೂ ಬೈಕ್ ಮಧ್ಯೆ ರಾ. ಹೆ.75ರ ಮೆಲ್ಕಾರ್ ಜಂಕ್ಷನ್ ನಲ್ಲಿ ನ.16ರ ತಡರಾತ್ರಿ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.17 ರಂದು ನಡೆದಿದೆ.
ಮೃತರನ್ನು ಮಂಗಳೂರು ನಿವಾಸಿ ಗಣೇಶ್(36) ಎನ್ನಲಾಗಿದೆ.
ಗಣೇಶ್ ರವರು ಮೆಲ್ಕಾರ್ ಜಂಕ್ಷನ್ ನಲ್ಲಿ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆಗೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಗಣೇಶ್ ರವರು ಮೆಲ್ಕಾರ್ ಸಮೀಪದ ಮಾರ್ನಬೈಲು ಸರ್ವೀಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯ ಸಂದರ್ಭದಲ್ಲಿ ಲಾರಿ ಚಾಲಕ ಅಪಘಾತ ತಪ್ಪಿಸಲು ಪ್ರಯತ್ನಿಸಿದ ವೇಳೆ ಲಾರಿ ವೃತ್ತಕ್ಕೆ ಡಿಕ್ಕಿ ಹೊಡೆದಿದ್ದು, ಮೆಲ್ಕಾರ್ ನಲ್ಲಿದ್ದ ಸರ್ಕಲ್ ಹುಡಿಯಾಗಿದೆ.
ಘಟನೆ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.