ಪುತ್ತೂರು: ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡ ಬಂದು ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸಹ ಸವಾರ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡೆದಿದೆ.
ಮೃತರನ್ನುಸುರೇಶ್(53) ಎನ್ನಲಾಗಿದೆ.
ಕಡಬ ತಾಲೂಕು ಎಡಮಂಗಲ ಗ್ರಾಮದ ಎಡಮಂಗಲ- ಚಾರ್ವಕ ರಸ್ತೆಯಲ್ಲಿ ಎಡಮಂಗಲ ಪೇಟೆಯಿಂದ ಕೊಳಂಬೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುವ ಕೇರಳ ಮೂಲದ ಸಂತೋಷ್ ತನ್ನ ಅಣ್ಣ ಸುರೇಶ್ ರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ನಾಯಿಯೊಂದು ಅಡ್ಡ ಬಂದ ಪರಿಣಾಮ ಸ್ಕೂಟರ್ ಸವಾರ ಸಂತೋಷ ಎಂಬವರ ಹತೋಟಿ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಸ್ಕೂಟರ್ ನಲ್ಲಿ ಸಹ ಸವಾರರಾಗಿದ್ದ ಸುರೇಶ್ ರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.