ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯಾಡಳಿತ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ದ.10 ರಂದು
ನಡೆಯಲಿರುವ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿರುವ ಅಗ್ರಗಣ್ಯ ಸಹಕಾರಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಕುಮಾರ್
ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್
ರವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ
ಸ್ಪರ್ಧಿಸುವಂತೆ ಕೆಪಿಸಿಸಿ ಅಧ್ಯಕ್ಷರು ಸಲಹೆ ನೀಡಿದ್ದಾರೆ.
ಈ ಸಲಹೆಯನ್ನು ನಿರಾಕರಿಸಿರುವ ಡಾ.ರಾಜೇಂದ್ರ ಕುಮಾರ್ ರವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿರುವ ತಾನು ಏಕಾಏಕಿಯಾಗಿ ಯಾವುದೇ ನಿರ್ಧಾರ ಕೈಗೊಳ್ಳದೇ ಕಾರ್ಯಕರ್ತರೊಂದಿಗೆ ಚರ್ಚಿಸಿ
ಎರಡು ದಿನಗಳಲ್ಲಿ ತೀರ್ಮಾನಿಸುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ದ್ವಿಸದಸ್ಯ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಎರಡು ಅಭ್ಯರ್ಥಿಗಳ ಆಯ್ಕೆಗೆ ಅವಕಾಶವಿದೆ. ಈ ನಿಟ್ಟಿನಲ್ಲಿ ಪ್ರಬಲ ಪಕ್ಷಗಳಾಗಿರುವ ಬಿಜೆಪಿ ಮತ್ತು ಕಾಂಗ್ರೆಸ್ ಈಗಾಗಲೇ
ಕಾಂಗ್ರೆಸ್ ಚುನಾವಣಾ ತಂತ್ರ ರೂಪಿಸಿದ್ದು ತಮ್ಮ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸುವ ನಿಟ್ಟಿನಲ್ಲಿ ಕಸರತ್ತು ನಡೆಸುತ್ತಿವೆ.
ಬಿಜೆಪಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರ ಸ್ಪರ್ಧೆ ಖಚಿತವಾಗಿದ್ದು, ಕಾಂಗ್ರೆಸ್ ಇನ್ನೂ ಅಭ್ಯರ್ಥಿಯ
ಆಯ್ಕೆಯನ್ನು ಅಂತಿಮಗೊಳಿಸಿಲ್ಲ.
ಈ ಮಧ್ಯೆ ಡಾ. ಎಂ.ಎನ್.ರಾಜೇಂದ್ರ ಕುಮಾರ್
ರವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿ ಈಗಾಗಲೇ ಮಂಗಳೂರಿನಲ್ಲಿ ಚುನಾವಣಾ ಕಚೇರಿಯನ್ನೂ ತೆರೆದಿರುವ ಡಾ. ಎಂ. ಎನ್.ರಾಜೇಂದ್ರ ಕುಮಾರ್ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ರವರು ನ.17 ರಂದು ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸಿದ್ದು, ತಾವು ಪಕ್ಷೇತರರಾಗಿ ಸ್ಪರ್ಧಿಸುವುದು ಬೇಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಂದು ಕಾಂಗ್ರೆಸ್ ನಾಯಕರು
ಡಾ|ಎಂ.ಎನ್.ರಾಜೇಂದ್ರ ಕುಮಾರ್ ರವರಿಗೆ ಸಲಹೆ ನೀಡಿದರು. ಈ ಕುರಿತು ಯಾವುದೇ ನಿರ್ಧಾರವನ್ನು ಪ್ರಕಟಿಸದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, ‘ತಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ.ಸಹಕಾರ ಕ್ಷೇತ್ರವನ್ನು ಪ್ರತಿನಿಧಿಸುವ ನಿಟ್ಟಿನಲ್ಲಿ ತಾನು ಈ ನಿರ್ಧಾರ ಕೈಗೊಂಡಿದ್ದೇನೆ. ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಾದರೆ ಈ ಮೊದಲೇ ತಮ್ಮ ಬಳಿಗೆ ಬರುತ್ತಿದ್ದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿ ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿರುವ ನಾನು ಈಗ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದೆ ಕಾರ್ಯಕರ್ತರೊಂದಿಗೆ ಚರ್ಚಿಸಿ ಎರಡು ದಿನಗಳ ಬಳಿಕ ನಿರ್ಧಾರ ಪ್ರಕಟಿಸುವುದಾಗಿ’ ಹೇಳಿದರು ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ
ಶಾಸಕರಾದ ಬಿ.ಎ.ಮೊದೀನ್, ಗೋಪಾಲ ಪೂಜಾರಿ, ಕಣಚೂರು ಮೋನು, ಡಾ. ರಾಜೇಂದ್ರ
ಕುಮಾರ್ ಅವರ ಮುಖ್ಯ ಚುನಾವಣಾ ಉಸ್ತುವಾರಿ ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.