ವಿಟ್ಲ: ಮಂಕುಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರು, ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಆಚಾರ್ (95) ರವರು ನ.18 ರಂದು ಮಂಗಳೂರಿನ ಸ್ವಗೃಹದಲ್ಲಿ ನಿಧನರಾದರು.
ಪ್ರಗತಿಪರ ಕೃಷಿಕರಾಗಿದ್ದ ರಾಮಕೃಷ್ಣ ಆಚಾರ್ ರವರು ಕೊಡುಗೈ ದಾನಿಯಾಗಿದ್ದು, ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿದ್ದರು.