ಪುತ್ತೂರು: ದೇಶದಲ್ಲಿ ಗೊಂದಲ ಸೃಷ್ಟಿಸಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ರವರು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕಿಸಾನ್ ಘಟಕದಿಂದ ಮಹಾತ್ಮ ಗಾಂಧೀಜಿಯವರ ಮತ್ತು ಕಾಂಗ್ರೇಸಿನ ತತ್ವ ಸಿದ್ಧಾಂತಗಳಲ್ಲಿ ರೈತರು ನಂಬಿಕೆಯಿಟ್ಟು ನಡೆಸಿದ ಪ್ರತಿಭಟನೆಗೆ ಜಯ ಸಿಕ್ಕಿದೆ ಎಂದು ಪುತ್ತೂರು ಗಾಂಧಿ ಕಟ್ಟೆಯಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ, ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಜಿಲ್ಲಾ ಕಿಸಾನ್ ಘಟಕದ ಉಪಾಧ್ಯಕ್ಷ ಎ.ಕೆ.ಜಯರಾಮ ರೈ, ಪುತ್ತೂರು ಕಿಸಾನ್ ಘಟಕದ ಅಧ್ಯಕ್ಷ ಮುರಳಿಧರ ಗೌಡ, ರೋಶನ್ ರೈ ಬನ್ನೂರು, ಎಪಿಎಂಸಿ ಸದಸ್ಯ ಅಬ್ದುಲ್ ಶಕೂರ್ ಮತ್ತಿತರರು ಹರ್ಷ ವ್ಯಕ್ತಪಡಿಸಿದರು.