ಬಂಟ್ವಾಳ: ಕುದ್ರೆಬೆಟ್ಟು ಕಲ್ಲಡ್ಕ ಸರಕಾರಿ ಪ್ರಾಥಮಿಕ ಶಾಲಾ ಅಭಿವೃದ್ಧಿ ಶ್ರಮಿಸಿದ ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುದ್ರೆಬೆಟ್ಟು ರವರನ್ನು ನೂತನ ಶಾಲಾಭಿವೃದ್ಧಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ವತಿಯಿಂದ ಶಾಲಾ ಕಾರ್ಯಕ್ರಮದಲ್ಲಿ ವಿಟ್ಲ ಕ್ಷೇತ್ರದ ಮಾಜಿ ಶಾಸಕರಾದ ರುಕ್ಮಯ ಪೂಜಾರಿ ಎಳ್ತಿಮಾರ ರವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ವಿಠಲ್ ಬಿ. ಆರ್ ,ಗ್ರಾಮ ಪಂಚಾಯತ್ ಸದಸ್ಯರಾದ ಲತೀಶ್ ಕುರ್ಮನ್, ರಂಜಿನಿ, ಶೋಭಾ , ಇಂಡಿಯನ್ ಗ್ಯಾಸ್ ಮಾಲಕರು ಜಗನ್ನಾಥ ಚೌಟ ಮಾಣಿ, ದಾಸ್ ಪೆಟ್ರೋಲ್ ಮಾಲಕರಾದ ಸುಭಾಷ್ ರೈ ,ಮಾಜಿ ಪಂಚಾಯತ್ ಅಧ್ಯಕ್ಷರಾದ ಸುಂದರ ಸಾಲಿಯಾನ್, ಆಶಾ ಕಾರ್ಯಕರ್ತೆ ಸುಜಾತ ಎಂ , ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶಿಲ್ಪ , ಅಂಗನವಾಡಿ ಶಿಕ್ಷಕಿ ಸುರೇಖಾ , ಛಾಯಾಚಿತ್ರಗ್ರಾಹಕರದ ಚಿನ್ನ ಮೈರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಿವರಾಜ್ ಕುಮಾರ್ , ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಶ್ಯಾಮಲಾ ನೆಲ್ಲಿ, ಶಾಲಾ ಮುಖ್ಯ ಶಿಕ್ಷಕಿ ಚೇತನ ಪಿ.ವಿ ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರುಗಳು ಶಾಲಾ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.