ಪುತ್ತೂರು : ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿಗಳ ಹಾಗೂ ಅಪರಿಚಿತ ಯುವಕರ ನಡುವೆ ಮಾತಿಗೆ ಮಾತು ಬೆಳೆದು ಪೊಲೀಸರು ಆಗಮಿಸಿ ಠಾಣೆಗೆ ಕರೆದೊಯ್ದ ಘಟನೆ ನ.19 ರಂದು ನಡೆದಿದೆ ಎಂದು ತಿಳಿದು ಬಂದಿದೆ.
ಕಾಲೇಜು ವಿದ್ಯಾರ್ಥಿನಿಯರನ್ನು ಅಪರಿಚಿತ ಯುವಕರು ಹಿಂಬಾಲಿಸಿಕೊಂಡು ಬಂದಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳಿಗೆ ತಿಳಿಸಿದ್ದು, ವಿದ್ಯಾರ್ಥಿಗಳು ಆಗಮಿಸಿ ಹಿಂಬಾಲಿಸಿಕೊಂಡು ಬಂದ ಯುವಕರನ್ನು ವಿಚಾರಿಸುತ್ತಿದ್ದ ವೇಳೆ ವಿಷಯ ತಿಳಿದು ಆಗಮಿಸಿದ ಪೊಲೀಸರು ವಿಷಯ ಬಿಗಡಾಯಿಸು ಮುಂಚೆ ಪರಿಸ್ಥಿತಿಯನ್ನು ಹತೋಟಿ ತಂದು ಯುವಕರನ್ನು ಠಾಣೆಗೆ ಕರೆದೊಯ್ದ ಘಟನೆ ನೆಲ್ಲಿಕಟ್ಟೆಯ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.
ಹಿಂಬಾಲಿಸಿಕೊಂಡು ಬಂದ ಯುವಕರನ್ನು ವಿಚಾರಣೆಗಾಗಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ಯಿದಿದ್ದಾರೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.