ಪುತ್ತೂರು: ಡಿ. 21ರಿಂದ 27ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿರುವ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರ ಬಿಡುಗಡೆ ನ.21ರಂದು ನಡೆಯಿತು.
ಪ್ರಗತಿಪರ ಕೃಷಿಕ ಕೇಶವ ಭಂಡಾರಿ ಕೈಪ ರವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು. ಗೋಪಾಲ ಶೆಟ್ಟಿ ಕಳೆಂಜರವರು ಉದ್ಘಾಟಿಸಿದರು.
ಆಮಂತ್ರಣ ಪತ್ರ ಬಿಡುಗಡೆ ಸಮಾರಂಭದಲ್ಲಿ ಧಾರ್ಮಿಕ ಮುಖಂಡ ಸೀತಾರಾಮ ರೈ ಬಿಳಿಯೂರುಗುತ್ತು, ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಚಂದ್ರಶೇಖರ ಸನಿಲ್ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಗಂಗಾಧರ್ ಶೆಟ್ಟಿ ಮಟoತಬೆಟ್ಟು , ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆ ಹಿತ್ಲು ಅತಿಥಿಗಳಾಗಿ ಭಾಗವಹಿಸಿದ್ದರು. ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗವಹಿಸಿದ್ದರು. ಸಮಿತಿಯ ಪದಾಧಿಕಾರಿಗಳಾದ ನಿರಂಜನ ರೈ ಮಠಂತಬೆಟ್ಟು ಸ್ವಾಗತಿಸಿ ಜಗನ್ನಾಥ ಶೆಟ್ಟಿ ನಡುಮನೆ ವಂದಿಸಿದರು. ಕರುಣಾಕರ ಸಾಮಾನಿ ಸಂಪಿಗೆದಡಿ ಕಾರ್ಯಕ್ರಮ ನಿರೂಪಿಸಿದರು.