ಬೆಂಗಳೂರು : ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕರು ಮತ್ತು ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರು ವಾರದಲ್ಲಿ 12 ಅವಧಿ ಪಾಠ ಮಾಡಲೇಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದಂತೆ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು ತರಗತಿ ತೆಗೆದುಕೊಂಡ ವರದಿಯನ್ನು ಕೂಡಾ ತಮ್ಮ ವ್ಯಾಪ್ತಿಯ ಬಿಇಓ ಮತ್ತು ಬಿ ಆರ್ ಸಿ ಗಳಿಗೆ ಕಳುಹಿಸಿಕೊಡಬೇಕು ಮತ್ತು ಇದರಿಂದ ಮಕ್ಕಳಿಗೆ ಅನುಕೂಲವಾಗಲಿದೆ, ಫಲಿತಾಂಶ ಕೂಡ ಉತ್ತಮವಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶುಲ್ಕ ಕುರಿತಂತೆ ಏರ್ಪಟ್ಟಿದ್ದ ಕೆಲವೊಂದು ತಕರಾರುಗಳ ಪರಿಹಾರಕ್ಕಾಗಿಯೂ ಅಧಿಕಾರಯುಕ್ತ ಸಮಿತಿಗಳನ್ನು ರಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.