ಉಡುಪಿ: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ನಂತರ ಮದುವೆಯಾಗಲು ನಿನ್ನ ಜಾತಕ ಸರಿಯಿಲ್ಲ ಎಂಬ ಕಾರಣ ನೀಡಿ ಮದುವೆ ನಿರಾಕರಿಸಿದ ಆರೋಪಿಯ ವಿರುದ್ಧ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಉಡುಪಿಯಲ್ಲಿ ನಡೆದಿದೆ.
ತಮಿಳುನಾಡಿನ ವೆಲ್ಲೂರು ನಿವಾಸಿಯಾಗಿರುವ ಪ್ರಶಾಂತ್ ಮುದಲಿಯಾರ್ ವಿರುದ್ಧ ದೂರು ನೀಡಲಾಗಿದೆ.
ಯುವತಿ ಹಾಗೂ ಪ್ರಶಾಂತ್ ಇಬ್ಬರೂ ಕಾಲೇಜು ದಿನಗಳಿಂದಲೇ ಪರಿಚಿತರು. ಆಗಿನಿಂದಲೂ ಇಬ್ಬರೂ ಕೂಡ ಪರಸ್ಪರ ಪ್ರೀತಿಸುತ್ತಿದ್ದರು. ಕಾಲೇಜು ಮುಗಿದ ನಂತರ ಪ್ರಶಾಂತ್ ಮಣಿಪಾಲದಲ್ಲಿ ಉದ್ಯೋಗದಲ್ಲಿದ್ದ. ಕಳೆದ ಜೂನ್ ತಿಂಗಳಲ್ಲಿ ಯುವತಿಯನ್ನು ಮಣಿಪಾಲಕ್ಕೆ ಕರೆಸಿಕೊಂಡಿದ್ದ ಪ್ರಶಾಂತ್, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ನಂತರ ಮದುವೆಯಾಗಲು ನಿಕಾರಿಸಿದ್ದಾನೆ ಎನ್ನಲಾಗಿದೆ.
ಯುವತಿ ಎಷ್ಟೇ ಕೇಳಿಕೊಂಡರೂ ಕೂಡ ನಿನ್ನ ಜಾತಕ ಸರಿಯಿಲ್ಲ ಹೀಗಾಗಿ ಮದುವೆಯಾಗಲು ಸಾಧ್ಯವಿಲ್ಲ ಎಂದಿದ್ದಾನೆ. ಎಲ್ಲಾ ಪ್ರಯತ್ನಗಳನ್ನು ಮಾಡಿದ ನಂತರ ಸಂತ್ರಸ್ತೆ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.