ಬಂಟ್ವಾಳ: ದ.ಕ.ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಬಂಟ್ವಾಳ ಮೂಲದ ಮಂಜುನಾಥ ಭಂಡಾರಿ ಕಾಂಗ್ರೆಸ್ ಆಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
ಪ್ರಸ್ತುತ ಗ್ರಾಮೀಣ ಜನ ಜೀವನದ ಅವಿಭಾಜ್ಯ ಅಂಗವಾಗಿರುವ ಹಾಗೂ ದೇಶದ ವಿವಿದೆಡೆ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಕಾರಣವಾಗಿರುವ ಜನ ಸೇವಾ ಕೇಂದ್ರದ ರೂವಾರಿ, ಶೈಕ್ಷಣಿಕ ಮುಂದಾಳು , ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಾ. ಮಂಜುನಾಥ ಭಂಡಾರಿಯನ್ನು ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಮೂಲದವರಾದ ಮಂಜುನಾಥ ಭಂಡಾರಿ ಅವರು ತಮ್ಮ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ವನ್ನು ಬಂಟ್ವಾಳ ದಲ್ಲಿ ಯೇ ಮುಗಿಸಿದ್ದರು.
ಬಳಿಕ ಉನ್ನತ ಶಿಕ್ಷಣವನ್ನು ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಪೂರೈಸಿದರು.
ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೇಸ್ ಪಕ್ಷದ ಲ್ಲಿ ಸಕ್ರಿಯ ರಾಗಿದ್ದ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಎಐಸಿಸಿ ಮತ್ತು ಕೆಪಿಸಿಸಿಯ ವಿವಿಧ ಹುದ್ದೆಗಳಗಳಲ್ಲಿ ಮಂಜುನಾಥ್ ಭಂಡಾರಿ ಕಾರ್ಯನಿರ್ವಹಿಸಿದ್ದಾರೆ.ಪ್ರಸ್ತುತ ಉದ್ಯಮಿಯಾಗಿರುವ ಅವರು ಅಡ್ಯಾರು ಸಹ್ಯಾದ್ರಿ ಕಾಲೇಜನ್ನು ಮುನ್ನಡೆಸುತ್ತಿದ್ದಾರೆ.
ಕೊನೆಯ ಕ್ಷಣದವರೆಗೂ ಪಕ್ಷದ ಅಧಿಕೃತ ಅಭ್ಯರ್ಥಿ ಯಾರು..??ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಈ ನಡುವೆ ಸಹಕಾರಿ ಧುರೀಣ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಸ್ಪರ್ಧೆಗೆ ಒಳವು ತೋರಿ ಬಳಿಕ ಕಾಂಗ್ರೆಸ್ ವಲಯದಲ್ಲೂ ಅವರ ಹೆಸರು ಕೇಳಿ ಬಂದಿತ್ತು.
ನಾಮಪತ್ರ ಸಲ್ಲಿಕೆಗೆ ನ.23. ನಾಳೆ ಕೊನೆಯ ದಿನಾಂಕವಾಗಿದ್ದು, ಯಾರೆಲ್ಲ ನಾಮಪತ್ರ ಸಲ್ಲಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ…