ಮಣಿಪಾಲ: ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮೂಡು ಅಲೆವೂರು ಎಂಬಲ್ಲಿ ನಡೆದಿದೆ.
ಮೃತರನ್ನು ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿ ಹಾಗೂ ಮೂಡು ಅಲೆವೂರಿನ ಬಾಲಗೋಪಾಲ ಎಂಬವರ ಪುತ್ರಿ ಅಮೃತಾ ಎನ್ನಲಾಗಿದೆ.
ಅಮೃತಾ ಕಳೆದ 8 ವರ್ಷಗಳಿಂದ ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಇದೇ ಚಿಂತೆಯಲ್ಲಿ ಮನನೊಂದ ಇವರು ಮನೆಯ ಕೋಣೆಯಲ್ಲಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.