ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ನಡೆದು ಹೊಡೆದಾಡಿಕೊಂಡ ಘಟನೆ ಪುತ್ತೂರಿನ ಸರಕಾರಿ ಕಾಲೇಜುವೊಂದರಲ್ಲಿ ನಡೆದಿದ್ದು,ಹೊಡೆದಾಟದಿಂದ ಮೂವರು ವಿದ್ಯಾರ್ಥಿಗಳು ಗಾಯಗೊಂಡಗೊಂಡಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ ಆದಿಲ್ ಗೆ ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಗಾಂಧಿಕಟ್ಟೆ ಬಳಿ 50 ರಿಂದ 60 ಮಂದಿ ಸೇರಿದ್ದರು ಎಂದು ವರದಿಯಾಗಿದೆ.
ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟದಲ್ಲಿ ಆದಿಲ್ ಗಾಯಗೊಂಡಿದ್ದು, ಈ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆಗೆ ಮುಂದಾಗಿದ್ದು, ಈ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಪುಗೂಡಿ ಪ್ರತಿಭಟನೆಗೆ ಮುಂದಾದವರನ್ನು ತೆರಳುವಂತೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.