ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿಗೆ ಸಂಬಂಧಪಡದ ಸಂಘಟನೆ ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ.
ಹೊಟೆದಾಟದಲ್ಲಿ ಮೂವರು ಅನ್ಯಕೋಮಿನ ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಘಟನೆಗೆ ನಡೆಯುತ್ತಿದ್ದಂತೆ ಪೊಲೀಸರು ಗುಂಪು ಸೇರಿರುವವರನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..