ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿಗೆ ಸಂಬಂಧಪಡದ ಸಂಘಟನೆ ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ.
ಹೊಡೆದಾಟದಲ್ಲಿ ಗಾಯಗೊಂಡ ಒಂದು ತಂಡದ ಮೂವರು ಅನ್ಯಕೋಮಿನ ಯುವಕರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಿದಿದ್ದರೇ ಇನ್ನೊಂದು ತಂಡದ ಇಬ್ಬರು ಯುವಕರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಖಾಸಗಿ ಆಸ್ಪತ್ರೆಗೆ ದಾಖಲಾಗಿದ ಪ್ರಜ್ವಲ್ ಮತ್ತು ತೇಜಸ್, “ಪ್ರತಿಭಟನೆ ನಡೆದ ಬಳಿಕ ಠಾಣೆಗೆ ತೆರಳಿ ದೂರು ನೀಡಿ ತರಗತಿಗೆ ಹಿಂತಿರುಗುತ್ತಿರುವಾಗ ಬಿಳಿ ಬಣ್ಣದ ಕಾರಿನಲ್ಲಿ ಹೊರಗಿನಿಂದ ಬಂದ ಮೂವರು ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿಗಳ ಜೊತೆ ಸೇರಿಕೊಂಡು ಓಣಿಯಲ್ಲಿ ನಿಂತು ಮಾರಕಾಸ್ತ್ರಗಳಿಂದ ದಾಳಿ ಮಾಡಿ, ನೆಲಕ್ಕೆ ಹಾಕಿ ತುಳಿದು ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ…
ಪ್ರತಿಷ್ಠಿತ ಕಾಲೇಜಿನಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು, ಕಾನೂನಿನ ಮೇಲೆ ಯಾವುದೇ ಭಯವಿಲ್ಲದೇ ಈ ರೀತಿಯ ಕೃತ್ಯಗಳು ನಡೆಯುತ್ತಿರುವುದು ಶೋಚನಿಯವಾಗಿದೆ..