ಕಡಬ: ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಇಂದು ಬಳ್ಪದ ಪಾದೆ ಬಳಿ ನಡೆದಿದೆ.
ಪಂಜದ ಕೃಷ್ಣನಗರ ನಿವಾಸಿ ಕೇಶವ ಎಂಬವರು ತಮ್ಮ ಮಾರುತಿ ಆಲ್ಟೋ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಬಳ್ಪದ ಪಾದೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಂಡು ಬಂದಿದ್ದು, ಹೊಗೆ ಕಾಣಿಸಿಕೊಂಡಿದ್ದು, ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ.