ವಿಟ್ಲ: ಒಡಿಎಫ್ ಕಾರ್ಯಾಗಾರವನ್ನು ಕೇಪು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಪುದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ರವರು ನೆರವೇರಿಸಿದರು.
ಕಾರ್ಯಾಗಾರದಲ್ಲಿ ಪಂಚಾಯತ್ ಅಧ್ಯಕ್ಷರಾದ ಯಶಸ್ವಿನಿ ಶಾಸ್ತ್ರಿ, ಜಗಜ್ಜೀವನ್ ರಾಮ್ ಶೆಟ್ಟಿ, ಅಬ್ದುಲ್ ಕರೀಂ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.