ಮಂಗಳೂರು: ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಕಾರು ಚಲಿಸಿ ಇಬ್ಬರು ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರು ರೈಲ್ವೇ ನಿಲ್ದಾಣದ ಬಳಿ ಜಂಕ್ಷನ್ ನಲ್ಲಿ ನಡೆದಿದೆ.
ಪುಟ್ ಪಾತ್ ನಲ್ಲಿ 20 ಮಂದಿ ಕಾರ್ಮಿಕರು ಮಲಗಿದ್ದರು ಎನ್ನಲಾಗಿದೆ. ನಿಯಂತ್ರಣದ ತಪ್ಪಿದ ಕಾರು ಇತರ ವಾಹನಗಳಿಗೆ ಡಿಕ್ಕಿ ಹೊಡೆದು ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.