ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಮಾಡುವುದಾಗಿ ಗ್ರಾಮಪಂಚಾಯತ್ ನಿಂದ ಪರವಾನಿಗೆ ಪಡೆದ ಬಳಿಕ ಪ್ರಾರ್ಥನಾ ಮಂದಿರ ನಿರ್ಮಾಣ ಮಾಡಲು ಮುಂದಾಗಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡದ ವತಿಯಿಂದ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.
ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವರು ಜಮೀನು ಕ್ರಯಕ್ಕೆ ಪಡೆದು ಬಳಿಕ ಮನೆ ನಿರ್ಮಾಣಕ್ಕಾಗಿ ಗ್ರಾ.ಪಂ.ನಿಂದ ಪರವಾನಿಗೆ ಪಡೆದುಕೊಂಡಿದ್ದರು.
ಆದರೇ ಮನೆ ನಿರ್ಮಾಣವಾಗಬೇಕಿದ್ದ ಜಾಗದಲ್ಲಿ ಪ್ರಾರ್ಥನಾ ಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂಬ ಸ್ಥಳೀಯರ ದೂರು ಬಂದ ಹಿನ್ನೆಲೆಯಲ್ಲಿ ವಿಶ್ವಹಿಂದೂ ಪರಿಷತ್ ಭಜರಂಗದಳ ವಿಟ್ಲ ಪ್ರಖಂಡದ ಪ್ರಮುಖರು ಸ್ಥಳಕ್ಕೆ ಬೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದಾಗ ಇದು ಮನೆಯಂತಿರದೆ, ಪ್ರಾರ್ಥನಾ ಮಂದಿರದ ರೂಪದಲ್ಲಿ ಇರುವುದರಿಂದ ಇದರ ಪರವಾನಿಗೆಯನ್ನು ರದ್ದು ಮಾಡುವಂತೆ ಸ್ಥಳೀಯ ಗ್ರಾ.ಪಂ.ಪಿಡಿಒ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳನ್ನು ಸ್ಥಳಕ್ಕೆ ಕರೆಸಿ ತಿಳಿಸಲಾಯಿತು ಎಂದು ಸಂಘಟನೆಯ ಪ್ರಮುಖ ಲೋಹಿತ್ ಪಣೋಲಿಬೈಲು, ಹಾಗೂ ಸಚಿನ್ ಮೆಲ್ಕಾರ್ ತಿಳಿಸಿದ್ದಾರೆ.