ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆ ಅವರು ತಮ್ಮ ಜನ್ಮ ದಿನದ ಅಂಗವಾಗಿ ಪುತ್ತೂರು ಶ್ರಿ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದರ ಜತೆಗೆ ಪ್ರಜ್ಞಾ ವಿಶೇಷ ಮಕ್ಕಳ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಕೇಕ್ ಮತ್ತು ಕೆಲವೊಂದು ಸಾಮಗ್ರಿಗಳನ್ನು ವಿತರಿಸಿ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿದರು.



ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯ ಪಿ ಜಿ ಜಗನ್ನಿವಾಸರಾವ್, ಗೋಪಾಲಕೃಷ್ಣ ಹೇರಳೆ, ಪದ್ಮಶ್ರೀ ಸೋಲಾರ್ ಮಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಬಿಜೆಪಿ ಹಿಂದೂ ಮೋರ್ಚಾ ಜಿಲ್ಲಾಧ್ಯಕ್ಷ ಆರ್ ಸಿ ನಾರಾಯಣ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ ಗೌರಿ ಬನ್ನೂರು, ಪ್ರೇಮಲತಾ ನಂದಿಲ, ಶಿವರಾಮ ಸಪಲ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.