ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ನಾಲ್ವರನ್ನು ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಾಲ್ವರನ್ನು ಕರೆತಂದಿದ್ದಾರೆ ಎಂದು ಆರೋಪಿಸಿ ಠಾಣೆಯ ಮುಂಭಾಗದಲ್ಲಿ ಹಿಂದೂ ಜಾಗರಣ ವೇದಿಕೆಯ ಹಲವಾರು ಕಾರ್ಯಕರ್ತರು ಜಮಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..




























