ಮಂಗಳೂರು: ಕಾವೂರಿನ ಬಾಡಿಗೆ ಮನೆಯೊಂದರಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳ ತಂಡ ನ.26 ರಂದು ಭೇದಿಸುವಲ್ಲಿ ಯಶಸ್ವಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳನ್ನು ಕೃಷ್ಣಾಪುರ ನಿವಾಸಿ ಸನಾ ರಮ್ಲತ್ (46) ಮತ್ತು ಉಡುಪಿಯ ಉಳಿಯಾರಗೋಳಿ ನಿವಾಸಿ ಅಬ್ದುಲ್ ಹಫೀಜ್ (55) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳು ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಉಡುಪಿಯಿಂದ ಯುವತಿಯರನ್ನು ಕಳ್ಳಸಾಗಣೆ ಮಾಡಿ ಲೈಂಗಿಕ ದಾಸ್ಯಕ್ಕೆ ದೂಡುತ್ತಿದ್ದರು ಎನ್ನಲಾಗಿದೆ.
ಆರೋಪಿಗಳಿಂದ 10,060 ರೂಪಾಯಿ ನಗದು, 3 ಮೊಬೈಲ್ ಫೋನ್, ಕಾರು ಸೇರಿದಂತೆ 3,25,560 ರೂಪಾಯಿ ಮೌಲ್ಯದ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಾಗಿದೆ.