ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ
ಮಂಗಳೂರು ವಿಭಾಗದ ಪುರುಷರ ವಾಲಿಬಾಲ್
ಪಂದ್ಯಾಟವು ನ.29 ಮತ್ತು 30 ರಂದು ಕಾಲೇಜಿನ
ಕ್ರೀಡಾಂಗಣದಲ್ಲಿ ನಡೆಯಲಿದೆ.
ನ. 29 ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ ಎಸ್ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎರಡು ವಾಲಿಬಾಲ್ ಅಂಕಣದಲ್ಲಿ ಈ ಸ್ಪರ್ಧೆಗಳು
ನಡೆಯಲಿದ್ದು, ಮಂಗಳೂರು ವಿಭಾಗದ ವಿವಿಧ
ಇಂಜಿನಿಯರಿಂಗ್ ಕಾಲೇಜುಗಳ 12 ತಂಡಗಳು ಇದರಲ್ಲಿ
ಭಾಗವಹಿಸುತ್ತವೆ ಎಂದು ಪ್ರಾಂಶುಪಾಲ
ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.