ಚೆನ್ನೈ: ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನ.27 ರಂದು ರಾತ್ರಿ ಸಂಭವಿಸಿದೆ.
ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು–ಚೆನ್ನೈ ಎಕ್ಸಪ್ರೆಸ್ ರೈಲು ಕೇರಳದ ಕೋಯಿಕ್ಕೋಡ್ ಹಾಗೂ ಪಾಲಕ್ಕಾಡ್ ಮಾರ್ಗವಾಗಿ ಚೆನ್ನೈಗೆ ತೆರಳುತ್ತದೆ.