ವಿಟ್ಲ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಮಾಣಿ ಕರ್ನಾಟಕ ಪೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ, ಕೊಡಾಜೆ ನಿವಾಸಿ ಭರತ್ ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ.
ಈತ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ..