ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವ ಆರ್. ಅಶೋಕ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಭೆಯಲ್ಲಿ ಹೊಸ ತಳಿಯ ಕೊರೊನಾ ಕುರಿತು ಮಾತುಕತೆ ನಡೆಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಈ ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಚೆಕ್ಪೋಸ್ಟ್ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಸೂಚನೆ ಕೊಟ್ಟಿದ್ದೇವೆ. ಕೇರಳದಿಂದ ಬಂದವರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯ ಇರಲಿದೆ. ಹಾಸ್ಟೆಲ್ನಲ್ಲಿದ್ದವರಿಗೆ ಎರಡನೇ ಬಾರಿಗೆ ಟೆಸ್ಟ್ ಮಾಡಿಸಬೇಕು ಎಂದು ಸಿಎಂ ಜೊತೆ ಸಭೆ ಬಳಿಕ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕಚೇರಿ, ಹೋಟೆಲ್, ಮಾಲ್‌ಗಳಲ್ಲಿ ಸಿಬ್ಬಂದಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಲೇಬೇಕು. ಶಾಲಾ-ಕಾಲೇಜುಗಳಲ್ಲಿ ಕೊರೊನಾ ಕೇಸ್ ಹೆಚ್ಚಾಗಿವೆ. ಕೇಸ್ ಹೆಚ್ಚಾದ ಕಡೆ ನಿಗಾವಹಿಸಲು ಡಿಸಿಗಳಿಗೆ ಸೂಚನೆ ಕೊಡಲಾಗಿದೆ. ಜಿಲ್ಲಾಧಿಕಾರಿಗಳಿ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುತ್ತೆ. ಮದುವೆಗಳಲ್ಲಿ ಜನರು ಮಾಸ್ಕ್ ಧರಿಸುವುದು ಕಡ್ಡಾಯವಿರಲಿ. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮುಂದೂಡಿ. ಮುಂದಿನ ದಿನಗಳಲ್ಲಿ ಕೊರೊನಾ ಸ್ಥಿತಿಗತಿ ನೋಡಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಕೇಸ್ಗಳನ್ನ ನೋಡಿಕೊಂಡು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಕ್ರಿಸ್ಮಸ್, ನ್ಯೂಇಯರ್ ಸೆಲೆಬ್ರೇಷನ್ ಬಗ್ಗೆ ಮತ್ತೊಂದು ಸಭೆ:
ಏರ್ಪೋರ್ಟ್ಗಳಲ್ಲಿ ತಪಾಸಣೆ ತೀವ್ರಗೊಳಿಸಲು ಸೂಚನೆ ಕೊಡಲಾಗಿದೆ. ಕ್ರಿಸ್ಮಸ್, ನ್ಯೂಇಯರ್ ಸೆಲೆಬ್ರೇಷನ್ ಬಗ್ಗೆ ಮತ್ತೊಂದು ಸಭೆ ಮಾಡುತ್ತೇವೆ. ಬೂಸ್ಟರ್ ಡೋಸ್ ಕೊಡುವ ಬಗ್ಗೆ ಮನವಿ ಮಾಡಿದ್ದೇವೆ. ನಾವು ಕೇಂದ್ರ ಸರ್ಕಾರಕ್ಕೆ ನಾವು ಮನವಿ ಮಾಡಿದ್ದೇವೆ.
ಬೆಳವಣಿಗೆ ನೋಡಿಕೊಂಡು ಮತ್ತೊಂದು ಸಭೆ ಮಾಡ್ತೇವೆ. ಮದುವೆ, ಚುನಾವಣಾ ಪ್ರಚಾರಗಳಲ್ಲಿ ಮಾಸ್ಕ್ ಕಡ್ಡಾಯ ಎಂದು ಅಶೋಕ್ ಮಾಹಿತಿ ನೀಡಿದ್ದಾರೆ. ಕಡಲೆಕಾಯಿ ಪರಿಷೆ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ. ಥಿಯೇಟರ್ಗಳಲ್ಲಿ ಕೆಲಸ ಮಾಡುವವರಿಗೂ ಲಸಿಕೆ ಕಡ್ಡಾಯ. ಪ್ರೇಕ್ಷಕರೂ 2 ಡೋಸ್ ಕಡ್ಡಾಯವಾಗಿ ಪಡೆದಿರಬೇಕು ಎಂದು ಹೇಳಿದ್ದಾರೆ.
2 ಡೋಸ್ ಲಸಿಕೆ ಪಡೆಯುವುದು ಕಡ್ಡಾಯ
ಕೇರಳ, ಮಹಾರಾಷ್ಟ್ರದಿಂದ ರಾಜ್ಯ ಪವೇಶಿಸುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದ್ದೇವೆ. ಗಡಿಗಳಲ್ಲಿ 3 ಶಿಫ್ಟ್‌ನಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ ಕೊಡಲಾಗಿದೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು. 16 ದಿನಗಳ ಹಿಂದೆ ಕೇರಳದಿಂದ ಬಂದವರಿಗೆ ಮತ್ತೊಮ್ಮೆ ಪರೀಕ್ಷೆ ಮಾಡಬೇಕು. ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಬೇಕು. ಹಾಸ್ಟೆಲ್‌ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಟೆಸ್ಟ್ ಮಾಡಬೇಕು. ನೆಗೆಟಿವ್ ರಿಪೋರ್ಟ್ ಬಂದ್ರೂ 7ನೇ ದಿನಕ್ಕೆ ಟೆಸ್ಟ್ ಮಾಡಿಸಬೇಕು. ಹೋಟೆಲ್, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನ, ಕೆಲಸ ಮಾಡುವವರಿಗೆ 2 ಡೋಸ್ ಕಡ್ಡಾಯ ಎಂದು ಅಶೋಕ್ ತಿಳಿಸಿದ್ದಾರೆ.
ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳಲ್ಲಿ ಟೆಸ್ಟ್ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಕೊವಿಡ್ ಪರೀಕ್ಷೆ ಹೆಚ್ಚಿಸುವಂತೆ ಸೂಚಿಸಿದ್ದೇವೆ. ಸರ್ಕಾರಿ ಕಚೇರಿಗಳಲ್ಲಿ, ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಲೇಬೇಕು. ಸರ್ಕಾರಿ ಕಚೇರಿ, ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಮಾಡಬೇಕು. ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ನಗರ ಪ್ರವೇಶ. ಪಾಸಿಟಿವ್ ಇದ್ದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗುತ್ತೆ ಎಂದು ಹೇಳಿದ್ದಾರೆ.
ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು:
- ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ
- ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವೀಕ್ಷಣೆ ಕೈಗೊಳ್ಳುವುದು
- ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ
- ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು
- 16 ನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
- ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು
- ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು
- ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು
- ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು
- ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
- ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ
- ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು